ಸುಳ್ಯ, ಜ. 02 (DaijiworldNews/MB) : ಮನೆ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಸುಳ್ಯದ ಯುವ ಉದ್ಯಮಿ ಸಂತೋಷ್ ಮಡ್ತಿಲ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಅವರು ದೇವಚಳ್ಳ ಗ್ರಾಮದ ಮನೆಯೊಂದರ ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು.
ಕೂಡಲೇ ಅವರನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು ಬಳಿಕ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.