ಮಂಗಳೂರು, ಜ. 03 (DaijiworldNews/MB) : ಬೆಳ್ತಂಗಡಿಯ ಉಜಿರೆಯಲ್ಲಿ ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣಾ ಮತ ಎಣಿಕೆ ಸಂದರ್ಭ ಪಾಕಿಸ್ತಾನ ಪರ ಘೋಷಣೆ ಮಾಡಿದ ಘಟನೆಯ ಕುರಿತು ಫೇಸ್ಬುಕ್ ಪೋಸ್ಟ್ವೊಂದರಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ತನ್ನ ಮೇಲೆ ಸಾಮೂಹಿಕ ಅತ್ಯಾಚಾರದ ಬೆದರಿಕೆ ಹಾಕಿದ್ದಾನೆ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.

ಸಾಮಾಜಿಕ ಕಾರ್ಯಕರ್ತೆಯ ಆರೋಪದಂತೆ ಸಿಟಿ ಸೈಬರ್ ಕ್ರೈಮ್ ಪೊಲೀಸರು ಅತ್ಯಾಚಾರ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ದ ದೂರು ದಾಖಲಿಸಿದ್ದಾರೆ.
ಇತ್ತೀಚಿನ ಗ್ರಾಮ ಪಂಚಾಯಿತಿ ಚುನಾವಣೆಯ ಬಗ್ಗೆ ಮಹಿಳೆ ತನ್ನ ಅಭಿಪ್ರಾಯಗಳನ್ನು ಫೇಸ್ಬುಕ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ. ಅದಕ್ಕೆ ಕಾಮೆಂಟ್ ಮಾಡಿದ ವ್ಯಕ್ತಿಯೊಬ್ಬ ಅವ್ಯಾಚ ಪದಗಳನ್ನು ಬಳಸಿದ್ದು ಸಾಮೂಹಿಕ ಅತ್ಯಾಚಾರದ ಬೆದರಿಕೆ ಹಾಕಿದ್ದಾನೆ.
ಈ ವಿಚಾರಕ್ಕೆ ಸಂಬಂಧಿಸಿ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವು ಸಂಘಟನೆಗಳು ಈ ಕಾರ್ಯಕರ್ತೆಗೆ ಸಾಮೂಹಿಕ ಅತ್ಯಾಚಾರದ ಬೆದರಿಕೆ ಹಾಕಿರುವುದನ್ನು ಖಂಡಿಸಿದ್ದಾರೆ.