ವಿಟ್ಲ, ಜ 03 (DaijiworldNews/SM): ಪತ್ನಿಯ ಸಹೋದರಿಯ ನಗ್ನ ಚಿತ್ರಗಳನ್ನು ಇಟ್ಟುಕೊಂಡು ಲೈಂಗಿಕ ಕ್ರಿಯೆಗೆ ಸಹಕರಿಸಿದಬೇಕೆಂದು ಬೇಡಿಕೆ ಇಟ್ಟು ಬ್ಲಾಕ್ ಮೇಲ್ ಮಾಡಿದ ಪ್ರಕರಣ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣಚ ಲಕ್ಕೋನಿ ನಿವಾಸಿ ಬಶೀರ್ ಮೇಲೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಂಬು ಬೆದ್ರಕಾಡು ನಿವಾಸಿ ೧೯ ವರ್ಷದ ಅವಿವಾಹಿತ ಯುವತಿಯನ್ನು ಕಳೆದ ಸೆಪ್ಟೆಂಬರ್ ನಿಂದ ಆಕೆಯ ಅಕ್ಕನ ಪತಿಯೇ ಬಲಾತ್ಕಾರವಾಗಿ ನಿರಂತರ ದೈಹಿಕ ಸಂಪರ್ಕ ಮಾಡಿದ್ದ. ಅಲ್ಲದೆ, ನಗ್ನ ಚಿತ್ರಗಳನ್ನು ಮೊಬೈಲ್ ನಲ್ಲಿ ತೆಗೆದುಕೊಂಡಿದ್ದ ಎನ್ನಲಾಗಿದೆ.
ಈ ಚಿತ್ರಗಳನ್ನು ಇಟ್ಟುಕೊಂಡು ತನ್ನ ಬೇಡಿಕೆಗಳನ್ನು ಪೂರೈಸದೇ ಹೋದಲ್ಲಿ ಮೊಬೈಲ್ ನಲ್ಲಿರುವ ಚಿತ್ರಗಳನ್ನು ವೈರಲ್ ಮಾಡುವ ಜತೆಗೆ ಜೀವ ಬೆದರಿಕೆಯನ್ನು ಹಾಕಿದ್ದ ಎಂದು ದೂರಿನಲ್ಲಿ ಹೇಳಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.