ಬೆಂಗಳೂರು, ಜೂ 26: ಸೋಮವಾರ ತಾನೇ ಬಜೆಟ್ ಮಂಡನೆ ಮಾಡ್ತೀನೋ ಇಲ್ವೋ ಗೊತ್ತಿಲ್ಲ ಎಂದಿದ್ದ ಸಿಎಂ ಕುಮಾರಸ್ವಾಮಿ ಮಂಗಳವಾರ ಅದಕ್ಕೆ ತದ್ವಿರುದ್ದ ಹೇಳಿಕೆ ನೀಡಿದ್ದಾರೆ. ಏನೇ ಆಗಲಿ ಬಜೆಟ್ ಮಂಡನೆ ಮಾಡೇ ಮಾಡ್ತೀವಿ ಎಂದಿದ್ದಾರೆ.
ರಾಜ್ಯದಲ್ಲಿ ಮೈತ್ರಿ ಸರ್ಕಾರ ಬಜೆಟ್ ಮಂಡಿಸಲಿದ್ದು ಇದರಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ ಎಂದು ಎಂದು ಸಿಎಂ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಇದರ ಪೂರ್ವಭಾವಿಯಾಗಿ ಮಂಗಳವಾರ ದಿನವಿಡೀ ಸಭೆ ನಡೆಸಿದ್ದಾರೆ .ಬೃಹತ್, ಮಧ್ಯಮ, ಸಣ್ಣ ಕೈಗಾರಿಕೆ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಹಕಾರ ಇಲಾಖೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ವಸತಿ ಇಲಾಖೆ, ಪೌರಾಡಳಿತ, ನಗರಾಭಿವೃದ್ಧಿ, ಬಂದರು, ಒಳನಾಡು ಜಲ ಸಾರಿಗೆ ಇಲಾಖೆ, ಇ-ಆಡಳಿತ ಇಲಾಖೆಗಳೊಂದಿಗೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ. 10 ಇಲಾಖೆಗಳ ಜೊತೆ ಸಾಯಂಕಾಲದವರೆಗೂ ಮುಖ್ಯಮಂತ್ರಿ ಸಭೆ ನಡೆಸಲಿದ್ದು, ಸಂಬಂಧಪಟ್ಟ ಇಲಾಖೆಗಳ ಸಚಿವರು, ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.