ಕಾಪು, ಜ.06 (DaijiworldNews/PY): ಕಾರುಗಳ ನಡುವಿನ ಅಪಘಾತದಲ್ಲಿ ಕಾರು ಮಗುಚಿ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ಕಾಪು ಠಾಣಾ ವ್ಯಾಪ್ತಿಯ ಕಟಪಾಡಿಯಲ್ಲಿ ಸಂಭವಿಸಿದೆ.




ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಪೆಟ್ರೋಲ್ ಬಂಕ್ ಬಳಿ ಮಂಗಳೂರು ಕಡೆಯಿಂದ ಉಡುಪಿಯತ್ತ ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಮಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಧಾವಿಸಿ ತನಿಖೆ ನಡೆಸಿದ್ದಾರೆ.