ಮಂಗಳೂರು, ಜ. 07 (DaijiworldNews/MB) : ಪೊಲೀಸ್ ಆಯುಕ್ತ ಶಶಿ ಕುಮಾರ್ ಅವರು ಎನ್ಎಚ್ 66 ರ ಉಚ್ಚಿಲ ಬಸ್ ನಿಲ್ದಾಣದಲ್ಲಿ ಮದ್ಯ ಪಾರ್ಟಿ ಮಾಡಿದ್ದ ಆರು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರು ಮಂದಿ ತಡರಾತ್ರಿ ಪಾರ್ಟಿ ಮಾಡುತ್ತಿರುವುದು ಕಂಡುಬಂದಿದ್ದು ಅವರಿಗೆ ಆಯುಕ್ತರು ಕಠಿಣ ಎಚ್ಚರಿಕೆ ನೀಡಿದ್ದಾರೆ.

ಕೇವಲ ಎರಡು ದಿನಗಳ ಹಿಂದೆ ಅಧಿಕಾರ ವಹಿಸಿಕೊಂಡ ಶಶಿ ಕುಮಾರ್ ಅವರು ತಡರಾತ್ರಿಯಲ್ಲಿ ಸುತ್ತಾಡುವ ಜನರ ವಿರುದ್ಧ ಕ್ರಮ ಕೈಗೊಳ್ಳುವ ಕಾರ್ಯವನ್ನು ಪ್ರಾರಂಭಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ತಡರಾತ್ರಿ ಯಾರಿಗಾದರೂ ತೊಂದರೆ ಮಾಡುವವರ ವಿರುದ್ಧ ಹಾಗೂ ವಿನಾಃಕಾರಣ ಸುತ್ತಾಡುವವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಅವರು ತಡರಾತ್ರಿ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭ ಉಚ್ಚಿಲ ಬಸ್ ನಿಲ್ದಾಣದಲ್ಲಿ ಕೆಲವು ವ್ಯಕ್ತಿಗಳು ಪಾರ್ಟಿ ಮಾಡುತ್ತಿದ್ದರು, ಮದ್ಯ ಸೇವಿಸುತ್ತಿದ್ದರು. ಇದು ಆಯುಕ್ತರ ಗಮನಕ್ಕೆ ಬಂದಿದೆ. ಆಯುಕ್ತರು ಕೂಡಲೇ ಅವರ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಅವರ ನಾಲ್ಕು ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಆರು ಮಂದಿಯ ವಿರುದ್ದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.