ಬಂಟ್ವಾಳ, ಜ. 07 (DaijiworldNews/MB) : "ಕೇಂದ್ರ ಮತ್ತು ರಾಜ್ಯದಲ್ಲಿನ ಸರ್ಕಾರಗಳ ವೈಫಲ್ಯಗಳ ವಿರುದ್ಧ ಅಭಿಯಾನ ನಡೆಸಲು ಮೈಸೂರು ವಿಭಾಗ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವು ಬಂಟ್ವಾಳದಲ್ಲಿ ನಡೆಸಿದ ಸಮ್ಮೇಳನವನ್ನು ಸ್ವಾಗತಾರ್ಹ" ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಬಿ ಜನಾರ್ಧನ್ ಪೂಜಾರಿ ಅವರು ಸಮ್ಮೇಳನಕ್ಕೆ ಶುಭ ಹಾರೈಸಿ ಮಾತನಾಡಿದರು.

ಬುಧವಾರ ಕೆಪಿಸಿಸಿ ಕಾರ್ಯನಿರ್ವಾಹಕ ಅಧ್ಯಕ್ಷ ಸಲೀಂ ಅಹ್ಮದ್ ಅವರು ಜನಾರ್ದನ್ ಪೂಜಾರಿ ಅವರ ನಿವಾಸಕ್ಕೆ ಭೇಟಿ ನೀಡಿದ್ದು ಈ ಸಂದರ್ಭ ಪೂಜಾರಿ ಶುಭಾಶಯ ತಿಳಿಸಿದರು.
''ನಾಯಕರು ಮತ್ತು ಕಾರ್ಯಕರ್ತರು ಸೇರಲು ಮತ್ತು ಪಕ್ಷವನ್ನು ಸಂಘಟಿಸಲು ಒತ್ತು ನೀಡುವುದು ಅವಶ್ಯಕ. ಕಾರ್ಯಕರ್ತರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ನಾವು ಸಮರ್ಪಣೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ರಾಜ್ಯ ಮತ್ತು ಕೇಂದ್ರದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿ'' ಎಂದು ಹಾರೈಸಿದರು.
ಮಾಜಿ ಕೆಪಿಸಿಸಿ ಕಾರ್ಯದರ್ಶಿ ತಾರಾನಾಥ್ ಶೆಟ್ಟಿ ಪುರುಷೋತಮ್ ಚಿತ್ರಾಪುರ ಹಾಗೂ ಕರುಣಾಕರ್ ಶೆಟ್ಟಿ ಉಪಸ್ಥಿತರಿದ್ದರು.