ಮಂಗಳೂರು, ಜ 07 (DaijiworldNews/SM): ಕರಾವಳಿಯ ಮರಳುಗಾರಿಕೆ ಸಮಸ್ಯೆ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ. ಜಿಲ್ಲಾಧಿಕಾರಿಗಳಿಗೆ ಕೆಲವು ಸೂಚನೆಯನ್ನು ಕೂಡ ಸಭೆಯಲ್ಲಿ ನೀಡಲಾಗಿದೆ. 30 ಬ್ಲಾಕ್ ಗಳಲ್ಲಿ ಮರಳು ತೆಗೆಯಲು ಅವಕಾಶ ನೀಡಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿಸಿ ಪಾಟೀಲ್ ಹೇಳಿದ್ದಾರೆ.

ಕರಾವಳಿಯ ಎರಡು ಜಿಲ್ಲೆಗಳಲ್ಲಿ ಆಕ್ರಮ ಕಲ್ಲು ಗಣಿಗಾರಿಕೆ ನಡೆದಿರುವುದು ಗಮನಕ್ಕೆ ಬಂದಿದೆ. ಆಕ್ರಮದಲ್ಲಿ ಭಾಗಿಯಾದವರ ವಿರುದ್ದ ಕಠಿಣ ಕ್ರಮಕ್ಕೆ ಸೂಚಿಸಲಾಗಿದೆ. ಕೇರಳಕ್ಕೆ ಆಕ್ರಮವಾಗಿ ಮಣ್ಣು ಸಾಗಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಕ್ರಮವಾಗಿ ಸಾಗಾಟವನ್ನು ಶೀಘ್ರದಲ್ಲೇ ಸಂಪೂರ್ಣ ಬಂದ್ ಮಾಡಲಾಗುವುದು. ಆಯ್ದ ಸ್ಥಳಗಳಲ್ಲಿ ಅತ್ಯಧಿಕವಾದ ಸಿಸಿಟಿವಿ ಕ್ಯಾಮರ ಅಳವಡಿಕೆ ಸೂಚನೆ ನೀಡಲಾಗಿದೆ ಎಂದು ಸಚಿವ ಸಿ.ಸಿ.ಪಾಟೀಲ್ ಜಿಲ್ಲಾಧಿಕಾರಿ ಕಛೇರಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಸದ್ಯ ಕರಾವಳಿಯಲ್ಲಿ ಮರಳುಗಾರಿಕೆ ದೊಡ್ಡ ಸಮಸ್ಯೆಯಾಗಿದ್ದು, ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕಾದ ಅಗತ್ಯತೆ ಇದೆ. ಅಲ್ಲದೆ, ಅಕ್ರಮ ಗಣಿಗಾರಿಕೆಗೂ ಕಡಿವಾಣ ಹಾಕಬೇಕಾಗಿದ್ದು, ಸೂಕ್ತ ದರಕ್ಕೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಕೆಂಪು ಕಲ್ಲುಗಳು ಲಭ್ಯವಾಗಬೇಕಾಗಿದೆ.