ಬೆಳ್ತಂಗಡಿ, ಜ.09 (DaijiworldNews/PY): ಇತ್ತೀಚೆಗೆ ಉಜಿರೆಯಲ್ಲಿ ನಡೆದಿದ್ದ ಮಗು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಆರು ಜನರನ್ನು ಬಂಧಿಸಿದ್ದು, ಇದೀಗ ಘಟನೆಯ ಬಳಿಕ ಪರಾರಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಚಾಮರಾಜನಗರ ನಿವಾಸಿ ನವೀನ್ (28) ಎಂದು ಗುರುತಿಸಲಾಗಿದೆ.
ಉಜಿರೆ ಉದ್ಯಮಿ ರಥಬೀದಿ ನಿವಾಸಿ ಎ.ಕೆ.ಶಿವನ್ ಎಂಬುವರ ಮೊಮ್ಮಗ ಅನುಭವ್ (8) ಮನೆ ಎದುರುಗಡೆ ಆಟವಾಡುತ್ತಿದ್ದ ವೇಳೆ ಅಪರಿಚಿತರು ಕಾರಿನಲ್ಲಿ ಅಪಹರಣ ಮಾಡಿದ್ದು, ಮನೆ ಮಂದಿ ಕಾರಿನ ಬಳಿ ಬಂದಂತೆ ಪರಾರಿಯಾಗಿದ್ದಾರೆ. 17 ಕೋಟಿ ರೂ. ನೀಡುವಂತೆ ಬೇಡಿಕೆಯಿಟ್ಟಿದ್ದರು.
ತ್ವರಿತ ಕಾರ್ಯಾಚರಣೆಯ ಬಳಿಕ ಪೊಲೀಸರು ಬಾಲಕನನ್ನು ಸುರಕ್ಷಿತವಾಗಿ ರಕ್ಷಿಸಿ, ಆರು ಜನರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಇದೀಗ ಪ್ರಕರಣದ ಏಳನೇ ಆರೋಪಿ ನವೀನ್ ಅನ್ನು ಬಂಧಿಸಿದ್ದಾರೆ.