ಕಾಸರಗೋಡು, ಜ. 09 (DaijiworldNews/SM): ಅಪ್ರಾಪ್ತೆಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿಯೋರ್ವನನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ತಿರುವನಂತಪುರ ಮೂಲದ ಗೋಡ್ವಿನ್ ಎಂದು ಗುರುತಿಸಲಾಗಿದೆ. ಬಾಲಕಿಯ ಕುಟುಂಬದವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ನೀಡಿದ ದೂರಿನ ಹಿನ್ನಲೆಯಲ್ಲಿ ಮಹಿಳಾ ಸೆಲ್ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದು, ಪೋಕ್ಸೋ ಕಾಯ್ದೆಯಂತೆ ಬಂಧಿಸಲಾಗಿದೆ.