ಸುಬ್ರಹ್ಮಣ್ಯ, ಜೂನ್ 28 : ಕರಾವಳಿಯ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ರಾಜ್ಯದಲ್ಲಿರುವ ಅತೀ ಶ್ರೀಮಂತ ದೇವಸ್ಥಾನವಾಗಿ ಹೊರಹೊಮ್ಮಿದೆ. ಮುಜರಾಯಿ ಇಲಾಖೆಯ ರಾಜ್ಯದ ಶ್ರೀಮಂತ ದೇವಸ್ಥಾನಗಳ ಪಟ್ಟಿ ಬಿಡುಗಡೆ ಮಾಡಿದ್ದು ಇದರಲ್ಲಿ ಸುಮಾರು 95.92 ಕೋಟಿ ರುಪಾಯಿಹೂ ಕಾಣಿಕೆ ಹಣವನ್ನು ಸಂಗ್ರಹಿಸುವ ಮೂಲಕ ಪ್ರಥಮ ಸ್ಥಾನವನ್ನು ಗಳಿಸಿದೆ.
ಇಲಾಖೆಯೂ ದೇವಸ್ಥಾನಗಳ ಕಾಣಿಕೆ ಡಬ್ಬದಲ್ಲಿ ಸಂಗ್ರಹವಾಗುವ ಹಣದ ಆಧಾರದ ಮೇಲೆ ಅತೀ ಶ್ರೀಮಂತ ದೇವಾಲಯಗಳ ಪಟ್ಟಿ ಮಾಡಿ ಬಿಡುಗಡೆಗೊಳಿಸಿತ್ತು. ಈ ಪಟ್ಟಿಯಲ್ಲಿ ಕುಕ್ಕೆ ಸುಬ್ರಮಣ್ಯ ಪ್ರಥಮಸ್ಥಾನ ಪಡೆದರೆ ಕೊಲ್ಲೂರಿನ ಮೂಕಾಂಬಿಕೆ ದೇವಸ್ಥಾನ ದ್ವಿತೀಯ ಹಾಗೂ ಕಟೀಲು ದುರ್ಗಾಪರಮೇಶ್ವರಿ ನಾಲ್ಕನೆಯ ಸ್ಥಾನದಲ್ಲಿದೆ. 95,92,54,363 ರೂಪಾಯಿ ಸಂಗ್ರಹಿಸುವ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಪ್ರಥಮ ಸ್ಥಾನ ಪಡೆದಿದ್ದು, 43,92,09,926 ರೂಪಾಯಿ ಸಂಗ್ರಹಿಸುವ ಮೂಲಕ ಕೊಲ್ಲೂರು ದೇವಸ್ಥಾನ ಎರಡನೇ ಸ್ಥಾನವನ್ನು ಪಡೆದಿದೆ. ಮೂರನೇ ಸ್ಥಾನವನ್ನು ಮೈಸೂರಿನ ಚಾಮುಂಡೇಶ್ವರಿ ದೇವಾಲಯ ಪಡೆದುಕೊಂಡಿದ್ದರೆ
23,91,59,886 ರೂಪಾಯಿ ಸಂಗ್ರಹಿಸುವ ಮೂಲಕ ಕಟೀಲು ಶ್ರೀ ದುರ್ಗಾಪರಮೇಶ್ವರಿ ನಾಲ್ಕನೆಯ ಸ್ಥಾನದಲ್ಲಿದೆ.