ಉಡುಪಿ, ಜ.11 (DaijiworldNews/PY): "ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಗೆದ್ದವರು ಹಾಗೂ ಸೋತವರು ಎಲ್ಲರೂ ನಮ್ಮ ಪಕ್ಷಕ್ಕೆ ನಾಯಕರೇ. 5 ವರ್ಷ ಎಲ್ಲರೂ ಪ್ರಾಮಾಣಿಕವಾಗಿ ಜನರ ಸೇವೆ ಮಾಡುವ ಮೂಲಕ ಪಕ್ಷ ಸಂಘಟನೆಯನ್ನು ಬಲಪಡಿಸಬೇಕು" ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ಇತ್ತೀಚಿಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆದ್ದ ಹಾಗೂ ಸ್ಪರ್ಧಿಸಿದ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜ.10ರ ರವಿವಾರ ನಡೆದ ಅಭಿನಂದನಾ ಕಾರ್ಯಕ್ರದಲ್ಲಿ ಮಾತನಾಡಿದರು.
ಜಿಲ್ಲಾ ಕಾಂಗ್ರೆಸ್ನ ಬ್ಲಾಕ್ ಸಂಯೋಜಕ ವೈ.ಸುಕುಮಾರ್ ಮಾತನಾಡುತ್ತಾ, "ಪ್ರತೀ ಬೂತ್ ಮಟ್ಟದಲ್ಲಿ 25 ಕಾರ್ಯಕರ್ತರ ಸಮಿತಿಯನ್ನುರಚಿಸುವ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಹಾಗೂ ಯಾವಾಗಲೂ ಜನರ ಸಂಪರ್ಕದಲ್ಲಿರಬೇಕು" ಎಂದು ತಿಳಿಸಿದರು.
ಬ್ಲಾಕ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆರು ಅಧ್ಯಕ್ಷತೆಯನ್ನು ವಹಿಸಿ, ಮುಂಬರುವ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗೆ ಸಜ್ಜಾಗುವಂತೆ ಕರೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ದಿನೇಶ್ ಪುತ್ರನ್, ಜಿಲ್ಲಾ ಕಾಂಗ್ರೆ ಸ್ಉಪಾಧ್ಯಕ್ಷರು ಪಂಚಾಯತ್ ಸದಸ್ಯರೂ ಆದ ಪ್ರಖ್ಯಾತ್ ಶೆಟ್ಟಿ, ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕ ಕಾರ್ಯದರ್ಶಿ ಯತೀಶ್ ಕರ್ಕೇರಾ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಬಿ.ನರಸಿಂಹ ಮೂರ್ತಿ, ಬಿ.ಕುಶಲ್ ಶೆಟ್ಟಿ, ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ಎಲ್ಲೂರು ಶಶಿಧರ ಶೆಟ್ಟಿ, ಎನ್.ಎಸ್.ಯು.ಐ.ಜಿಲ್ಲಾಅಧ್ಯಕ್ಷ ಸೌರಭ್ ಬಲ್ಲಾಳ್, ಮಾಜಿ ಬ್ಲಾಕ್ ಅಧ್ಯಕ್ಷ ಮಹಾಬಲ ಕುಂದರ್, ಬ್ಲಾಕ್ ಎಸ್.ಸಿ. ಘಟಕದ ಅಧ್ಯಕ್ಷ ಗಣೇಶ್ ನೆರ್ಗಿ, ಎಸ್.ಟಿ. ಘಟಕದ ಅಧ್ಯಕ್ಷ ಅನಂತ ನಾಯ್ಕ್, ನಗರಸಭಾ ಮಾಜಿ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ನಗರಸಭಾ ಸದಸ್ಯ ರಮೇಶ್ ಕಾಂಚನ್, ವೀಕ್ಷಕರಾದ ಸುಖೇಶ್ ಕುಂದರ್, ಮಾಧವ ಬನ್ನಂಜೆ, ಆಕಾಶ್, ಲಕ್ಷಣ ಪೂಜಾರಿ ಪೆರಂಪಳ್ಳಿ ಹಾಗೂ ಸೋಶಿಯಲ್ ಮೀಡಿಯಾದ ಹಮದ್ ಮೊದಲಾದವರು ಉಪಸ್ಥಿತರಿದ್ದರು.
ಬ್ಲಾಕ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕರ್ ಕಾರ್ಯಕ್ರಮ ನಿರೂಪಿಸಿದರು.