ಉಡುಪಿ ಜೂ29: ಕರಾವಳಿಯಲ್ಲಿ ಸುರಿಯುತ್ತಿರುವ ಮಹಾಮಳೆಗೆ ದೈವಸ್ಥಾನದ ಆವರಣಗೋಡೆ ಕುಸಿದು ಬಿದ್ದಿದ್ದು, ಈ ವೇಳೆ ವಿಧ್ಯಾರ್ಥಿನಿಯೊಬ್ಬಳು ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಧನ್ಯ ಎಂದು ಗುರುತಿಸಲಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಈಕೆ ಎಂಕಾಂ ವಿಧ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ನಿರಂತರ ಸುರಿಯುತ್ತಿರುವ ಮಹಾಮಳೆಗೆ ಬೈಂದೂರು ತಾಲೂಕಿನಲ್ಲಿರುವ ಉಳ್ಳೂರಿನ ಜಟ್ಟಿಕೇಶ್ವರ ದೈವಸ್ಥಾನದ ಆವರಣ ಗೋಡೆ ಕುಸಿದುಬಿದ್ದಿದೆ. ಈ ವೇಳೆ ದೈವಸ್ಥಾನದ ಸಮೀಪ ವಿಧ್ಯಾರ್ಥಿನಿ ಧನ್ಯ ನಡೆದು ಹೋಗುತ್ತಿದ್ದಳು. ಆಕೆಯ ಮೇಲೆಯೇ ಆವರಣ ಗೋಡೆ ಕುಸಿದು ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಈ ಘಟನೆ ಕುರಿತಂತೆ ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.