ಮಂಗಳೂರು, ಜ. 12 (DaijiworldNews/MB) : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮತ್ತು ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ, ಎ.ಜೆ.ಆಸ್ಪತ್ರೆ ಯ ವತಿಯಿಂದ ಪತ್ರಕರ್ತರು ಮತ್ತು ಅವರ ಕುಟುಂಬದ ಆರೋಗ್ಯದ ರಕ್ಷಣೆಗಾಗಿ ಪತ್ರಿಕಾ ಭವನದಲ್ಲಿ ಪುನರ್ ಆರಂಭಿಸಲಾದ ಮೀಡಿಯಾ ಹೆಲ್ತ್ ಕ್ಲಿನಿಕ್ಗೆ ಮಂಗಳೂರಿನ ಪೊಲೀಸ್ ಕಮಿಶನರ್ ಎನ್.ಶಶಿಕುಮಾರ್ ಮಂಗಳವಾರ ಚಾಲನೆ ನೀಡಿದರು.

ಎ.ಜೆ .ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಡೀನ್ ಡಾ.ಅಶೋಕ್, ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ್ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಮತ್ತಿತರರು ಉಪಸ್ಥಿತರಿದ್ದರು.
ದ.ಕ.ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಸ್ವಾಗತಿಸಿ,ವಂದಿಸಿದರು.