ಸುಳ್ಯ, ಜ.13 (DaijiworldNews/PY): ಸುಳ್ಯ ಶಾಸಕ ಎಸ್.ಅಂಗಾರ ಅವರು ಮೊದಲ ಬಾರಿಗೆ ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಇದು ಸುಳ್ಯ ವಿಧಾನಸಭಾ ಕ್ಷೇತ್ರ ಸೇರಿದಂತೆ ದ.ಕ. ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ.

ಕಡುಬಡತನದಿಂದ ಬೆಳೆದು ಬಂದ ಅಂಗಾರ ಅವರು ಕೃಷಿ ಕಾರ್ಮಿಕರಾಗಿ ದುಡಿದಿದ್ದರು. ಇವರು ಸಂಘ-ಪರಿವಾರ ಮೂಲಕ ಬೆಳೆದುಬಂದಿದ್ದು, 1989ರಲ್ಲಿ ಮೊದಲ ಬಾರಿಗೆ ಬಿಜೆಪಿಯಿಂದ ಸ್ಪರ್ಧೆಗೆ ಇಳಿದಿದ್ದರು. ಆದರೆ, ಕಾಂಗ್ರೆಸ್ ಅಭ್ಯರ್ಥಿಯ ವಿರುದ್ದ ಇವರು ಸೋಲು ಕಂಡಿದ್ದರು. ಬಳಿಕ 1994ರಲ್ಲಿ ಸ್ಪರ್ಧಿಸಿದ್ದ ಇವರು ತಮ್ಮ ವಿಜಯದ ಖಾತೆ ತೆರೆದಿದ್ದು, 1999, 2010, 2014, 2019ರಲ್ಲಿ ಸತತವಾಗಿ ಗೆಲುವು ಸಾಧಿಸಿದ್ದಾರೆ. ಆರನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
ಅಂಗಾರ ಅವರು ಸಚಿವ ಸ್ಥಾನಕ್ಕೆ ಲಾಭಿ ಮಾಡಿದವರಲ್ಲ. ಪಕ್ಷವು ಸಚಿವ ಸ್ಥಾನ ನೀಡಿದರೆ ಸಂತೋಷದಿಂದ ಸ್ವೀಕರಿಸುತ್ತೇನೆ ಎಂದು ಹೇಳುತ್ತಿದ್ದರು. ಹಿಂದೆ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ದೊರೆಯುತ್ತದೆ ಎಂದು ಖಚಿತವಾಗಿತ್ತು. ಆದರೆ, ಕೈತಪ್ಪಿ ಹೋಗಿದ್ದು, ಸುಳ್ಯ ವಿಧಾನಸಭಾ ಕ್ರೇತ್ರದ ಮತದಾರರ ಅಸಮಾಧಾನಕ್ಕೆ ಕಾರಣವಾಗಿತ್ತು.
ಇದೀಗ ಅಂಗಾರ ಅವರು ಮೊದಲ ಬಾರಿಗೆ ಸಚಿವರಾಗಿ ಆಯ್ಕೆಯಾಗಿದ್ದಾರೆ.