ಬೆಂಗಳೂರು, ಜೂ 30: ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನೇಮಿಸಲು ಬಿಜೆಪಿ ತೀರ್ಮಾನಿಸಿದೆ.
ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರ್ ನಲ್ಲಿ ಬಿಜೆಪಿಯ ಕಾರ್ಯಕಾರಿಣಿ ಸಭೆ ನಡೆದಿದ್ದು, ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ . ಈ ಹಿಂದೆ ಮಾಜಿ ಉಪಮುಖ್ಯಮಂತ್ರಿಗಳಾದ ಈಶ್ವರಪ್ಪನವರು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿದ್ದರು.
ಇದೀಗ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನೇಮಿಸಲು ಬಿಜೆಪಿ ತೀರ್ಮಾನಿಸಿದೆ. ಕೋಟ ಶ್ರೀನಿವಾಸ ಪೂಜಾರಿ ಬಿಜೆಪಿ ಪಕ್ಷದಲ್ಲಿ ಬೆಳೆದು ಬಂದು ಸಕ್ರಿಯ ನಾಯಕರಾಗಿದ್ದರು. ಮಾತ್ರವಲ್ಲ, ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಮೂರನೇ ಬಾರಿ ಸದಸ್ಯನಾಗಿ ಆಯ್ಕೆಯಾಗಿರುವ ಪೂಜಾರಿ, ಮುಜರಾಯಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಈ ಸಭೆಯಲ್ಲಿ ಕೇಂದ್ರದ ಸಚಿವರಾದ ಅನಂತ ಕುಮಾರ್, ಡಿ ವಿ. ಸದಾನಂದ ಗೌಡ, ಅನಂತ ಕುಮಾರ್ ಹೆಗ್ಗಡೆ, ರಮೇಶ್ ಜಿಗಜಿಣಗಿ ಸೇರಿದಂತೆ ಇನ್ನಿತರ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.