ಕಾಸರಗೋಡು, ಜ.13 (DaijiworldNews/PY): ಹದಿನಾರರ ಹರೆಯದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೋಕ್ಸೋ ಕಾಯ್ದೆಯಂತೆ ಕುಂಬಳೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕುಂಬಳೆ ನಾಯ್ಕಾಪುವಿನ ಪ್ರದೋಶ್ (25) ಎಂದು ಗುರುತಿಸಲಾಗಿದೆ.
ಬಾಲಕಿಯ ಸ್ನೇಹ ಬೆಳೆಸಿದ್ದ ಈತ ಬೈಕ್ನಲ್ಲಿ ನಿರ್ಜನ ಸ್ಥಳವೊಂದಕ್ಕೆ ಬಲವಂತವಾಗಿ ಕೊಂಡೊಯ್ದು ಜೊತೆ ನಿಂತು ಫೋಟೋ ತೆಗೆದು ಬಳಿಕ ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಬಾಲಕಿಯ ತಂದೆ ಕುಂಬಳೆ ಠಾಣಾ ಪೊಲೀಸರಿಗೆ ದೂರು ನೀಡಿದ್ದರು.
ಆರೋಪಿಯನ್ನು ಕಾಸರಗೋಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.