ಕಾಸರಗೋಡು, ಜ.13 (DaijiworldNews/PY): ಜಿಲ್ಲೆಯಲ್ಲಿ ಬುಧವಾರ 2 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 25,012ಕ್ಕೇರಿದೆ.

ಬುಧವಾರ 35 ಮಂದಿ ಗುಣಮುಖರಾಗಿದ್ದು, ಇಲ್ಲಿಯವರೆಗೆ 23, 989 ಮಂದಿ ಗುಣಮುಖರಾಗಿದ್ದಾರೆ.
ಸದ್ಯ 761 ಮಂದಿ ಚಿಕಿತ್ಸೆಯಲ್ಲಿದ್ದು, 5,734 ಮಂದಿ ನಿಗಾದಲ್ಲಿದ್ದಾರೆ. ಇಲ್ಲಿಯವರೆಗೆ 263 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
2020ರ ಫೆಬ್ರವರಿ 3ರಂದು ಜಿಲ್ಲೆಯಲ್ಲಿ ಮೊದಲ ಪ್ರಕರಣ ಪತ್ತೆಯಾಗಿದ್ದು, 11 ತಿಂಗಳಲ್ಲಿ ಸೋಂಕಿತರ ಸಂಖ್ಯೆ 25 ಸಾವಿರ ದಾಟಿದೆ.