ಮಂಗಳೂರು, ಜ.14 (DaijiworldNews/HR): ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಾದ ಶರದ್ ಅರವಿಂದ್ ಬೋಬ್ಡೆ ಅವರು ಬುಧವಾರ ರಾತ್ರಿ ಮಂಗಳೂರಿಗೆ ಆಗಮಿಸಿದ್ದು, ಗುರುವಾರ ಮುಂಜಾನೆ ಶೃಂಗೇರಿ ಮಠಕ್ಕೆ ತೆರಳಿದ್ದಾರೆ.

ಬೋಬ್ಡೆ ಅವರು ಶೃಂಗೇರಿ ಮಠಕ್ಕೆ ಭೇಟಿ ನೀಡಲು ಮಂಗಳೂರಿಗೆ ಆಗಮಿಸಿದ್ದು, ಬುಧವಾರ ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಬಳಿಕ ಕಾಪಿಕಾಡ್ನ ಹೋಟೆಲ್ ಓಶಿಯನ್ ಪರ್ಲ್ನಲ್ಲಿ ತಂಗಿದ್ದು, ಗುರುವಾರ ಬೆಳ್ಳಗ್ಗೆ ಮಂಗಳೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ತೆರಳಿ ರಾತ್ರಿ ಅಲ್ಲೇ ಉಳಿದು ಶುಕ್ರವಾರ ದೆಹಲಿಗೆ ಮರಳಲಿದ್ದಾರೆಂದು ತಿಳಿದು ಬಂದಿದೆ.
ಇನ್ನು ಅರವಿಂದ್ ಬೋಬ್ಡೆ ಅವರ ಭೇಟಿ ಹಿನ್ನಲೆಯಲ್ಲಿ ಮಂಗಳೂರು ನಗರಾದಾದ್ಯಂತ ಬಿಗೆ ಬಂದೋಬಸ್ತ್ ಕಲ್ಪಿಸಲಾಗಿದ್ದು, ಅವರು ಸಂಚರಿಸುವ ರಸ್ತೆ ಸಂಪೂರ್ಣ ಬಂದ್ ಮಾಡಿ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು.