ಸುಳ್ಯ, ಜ.14 (DaijiworldNews/PY): ಎಸ್. ಅಂಗಾರ ಅವರಿಗೆ ಸಚಿವ ಸ್ಥಾನ ಲಭಿಸಿರುವ ಬಗ್ಗೆ ಶ್ಲಾಘಿಸಿದ ತಾಲೂಕಿನ ಮಹಿಳೆಯೋರ್ವರು ಎಸ್ ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.

ಕೊಡಿಯಾಲ ನಿವಾಸಿ ಕುಂಟುಪುಣಿ ಹಾಲು ಉತ್ಪಾದಕ ಸೊಸೈಟಿಯ ನಿರ್ದೇಶಕಿ ನೀರಜಾಕ್ಷಿ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದು, ಅಂಗಾರ ಶಾಸಕರಾದ ನಂತರ ಗ್ರಾಮಾಂತರ ಪ್ರದೇಶಗಳಿಗೆ ಮೂಲ ಸೌಕರ್ಯಗಳು ತಲುಪುವಂತಾಗಿದೆ. ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಪತ್ರದ ಪ್ರತಿಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್, ಸಿಎಂ ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕಳುಹಿಸಲಾಗಿತ್ತು.