ಬಂಟ್ವಾಳ,ಜ.14 (DaijiworldNews/HR): ಮೆಲ್ಕಾರ್ ಸಮೀಪದ ಕಂದೂರು ಎಂಬಲ್ಲಿ ಬಾರ್ ವೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ನಗದು ಹಾಗೂ ಮದ್ಯದ ಬಾಟಲಿಗಳನ್ನು ಕಳವುಗೈದ ಘಟನೆ ನಡೆದಿದೆ.




ಸುರಭಿ ಬಾರ್ಗೆ ರಾತ್ರಿ ವೇಳೆ ಎದುರು ಭಾಗದ ಶಟರ್ನ ಬೀಗ ಮುರಿದು ಒಳನುಗ್ಗಿದ ಕಳ್ಳರು ಕ್ಯಾಶ್ ಕೌಂಟರ್ನಲ್ಲಿದ್ದ ಸುಮಾರು ಮೂರು ಲಕ್ಷ ರೂ. ನಗದು ದೋಚಿದ್ದಾರೆ.
ಇನ್ನು ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್, ನಗರ ಠಾಣಾ ಎಸ್.ಐ. ಅವಿನಾಶ್, ಅಪರಾಧ ವಿಭಾಗದ ಎಸ್.ಐ ಕಲೈಮಾರ್, ಎಚ್.ಸಿ.ಸುರೇಶ್ ಪಡಾರ್, ಸಿಬ್ಬಂದಿಗಳಾದ ಶ್ರೀಕಾಂತ್, ಉಸ್ಮಾನ್ , ಪ್ರಶಾಂತ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.