ಜು ,01 : ಭಾನುವಾರ ಬೆಳಿಗ್ಗೆ ಉತ್ತರಾಖಂಡ್'ನ ಪೌರಿ ಗರ್ಹ್ವಾಲ್ ಜಿಲ್ಲೆಯ ನಾನಿಧಂಡ ಪ್ರದೇಶದಲ್ಲಿ ಚಲಿಸುತ್ತಿದ್ದ ಬಸ್ಸೊಂದು ಪ್ರಪಾತಕ್ಕೆ ಉರುಳಿಬಿದ್ದ ಭೀಕರ ಘಟನೆ ಸಂಭವಿಸಿ ಪರಿಣಾಮ 47 ಮಂದಿ ಸಾವನ್ನಪ್ಪಿ, ಹಲವರಿಗೆ ಗಂಭೀರ ಗಾಯಗಳಾಗಿವೆ.
ಪೌರಿ ಗರ್ಹ್ವಾಲ್ ಜಿಲ್ಲೆಯ ನೈನಿದಂದ ಬ್ಲಾಕ್ ಬಳಿಯಿರುವ ಪಿಪಾಲಿ-ಭೂವಾನ್ ಮೊಟಾರ್'ವೇ ನಲ್ಲಿ ದುರ್ಘಟನೆ ಸಂಭವಿಸಿದೆ. ಬೋವಾನ್'ನಿಂದ ರಾಮ್ನಗರ ಮಾರ್ಗವಾಗಿ ಚಲಿಸುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿದ ಹಿನ್ನೆಲೆಯಲ್ಲಿ ಆಳದ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ ಬಸ್ ನಲ್ಲಿದ್ದ 44 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಎನ್'ಡಿಆರ್'ಎಫ್ ಪಡೆ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಪ್ರಪಾತಕ್ಕೆ ಬಿದ್ದ ಬಸ್ 2 ಭಾಗಗಳಾಗಿದ್ದು , ಪುಡಿ ಪುಡಿಯಾಗಿದೆ. ಬಸ್ನಲ್ಲಿದ್ದ ಪ್ರಯಾಣಿಕರು ನಜ್ಜುಗುಜ್ಜಾದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ.
ಸ್ಥಳಕ್ಕಾಗಮಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮತ್ತು ಗಾಯಗೊಂಡವರಿಗೆ ತಲಾ 2 ಲಕ್ಷ ರೂ ಮತ್ತು 50 ಸಾವಿರ ರೂ.ಗಳ ಪರಿಹಾರ ಧನವನ್ನು ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಘೋಷಿಸಿದ್ದಾರೆ