ಕಾಸರಗೋಡು,ಜ.16 (DaijiworldNews/HR): ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮದ್ಯ ಮತ್ತು ತಂಬಾಕು ಉತ್ಪನ್ನಗಳನ್ನು ಮಂಜೇಶ್ವರ ಅಬಕಾರಿ ದಳದ ಸಿಬಂದಿಗಳು ವಶಕ್ಕೆ ತೆಗೆದುಕೊಂಡ ಘಟನೆ ನಡೆದಿದೆ.

ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕೇರಳ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಸಾಗಿಸುತ್ತಿದ್ದ 50 ಪ್ಯಾಕೆಟ್ ಮದ್ಯವನ್ನು ವಶಪಡಿಸಿಕೊಂಡಿದ್ದು, ಆರೋಪಿಯನ್ನು ಪತ್ತೆಹಚ್ಚಲಾಗಲಿಲ್ಲ.
ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕರ್ನಾಟಕ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಸಾಗಿಸುತ್ತಿದ್ದ 50 ಕಿಲೋ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡಿರುವ ಅಬಕಾರಿ ಸಿಬಂದಿಗಳು ಬಂಗಾಳ ಮೂಲದ ಫರೀದ್ ( 25) ಎಂಬಾತನನ್ನು ಬಂಧಿಸಿದ್ದಾರೆ.