ಕಾರ್ಕಳ, ಜ 16 (DaijiworldNews/SM): ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ ಮೊಬೈಲ್ನಲ್ಲಿ ಸಂಭಾಷಣೆಯಲ್ಲಿ ತೊಡಗಿದ್ದ ಸವಾರನೊಬ್ಬನಿಗೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕರೊಬ್ಬರು ದಾರುಣ ರೀತಿಯಲ್ಲಿ ಮೃತಪಟ್ಟ ಘಟನೆ ನಿಟ್ಟೆ ಫಾರೆವರ್ ಬಳಿಯಲ್ಲಿ ಸಂಭವಿಸಿದೆ.



ನಿಟ್ಟೆಯ ವಸಂತ ದೇವಾಡಿಗ(47) ಘಟನೆಯಲ್ಲಿ ಮೃತಪಟ್ಟವರು. ನಿಟ್ಟೆ-ಕಾರ್ಕಳ ನಡುವೆ ಹಾದು ಹೋಗಿರುವ ರಾಜ್ಯ ಹೆದ್ದಾರಿಯ ಪಕ್ಕದಲ್ಲಿ ಬೈಕ್ ನಿಲ್ಲಿಸಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗ ಕಾರ್ಕಳದಿಂದ ಮಂಗಳೂರು ಕಡೆ ಚಲಿಸುತ್ತಿದ್ದ ಖಾಸಗಿ ಬಸ್ಸೊಂದು ಇವರಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದ ರಭಸಕ್ಕೆ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ.