ಮಂಗಳೂರು / ಉಡುಪಿ, ಜ. 18 (DaijiworldNews/MB) : ಉಡುಪಿ ಮತ್ತು ದಕ್ಷಿಣ ಕನ್ನಡ ಎರಡೂ ಜಿಲ್ಲೆಗಳಲ್ಲಿ, ಹಿಂದಿನ ವರ್ಷಕ್ಕೆ ಹೋಲಿಸಿದರೆ 2020 ರಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ. ಕೊರೊನಾ ಲಾಕ್ಡೌನ್, ಪೊಲೀಸ್ ಇಲಾಖೆಯು ಕೈಗೊಂಡ ಕಠಿಣ ಕ್ರಮಗಳು ಮತ್ತು ಸುಧಾರಿತ ರಸ್ತೆ ಪರಿಸ್ಥಿತಿಗಳು ಈ ಸಾಧನೆಗೆ ಪ್ರಮುಖ ಕೊಡುಗೆಗಳಾಗಿವೆ ಎಂದು ವರದಿಯಾಗಿದೆ.

2019 ರಲ್ಲಿ ಎರಡು ಜಿಲ್ಲೆಗಳಲ್ಲಿ ಒಟ್ಟು 3,162 ಸಂಭವಿಸಿದೆ. ಇದಕ್ಕೆ ಹೋಲಿಸಿದರೆ 2020 ರಲ್ಲಿ ಈ ಸಂಖ್ಯೆ 2,335 ಕ್ಕೆ ಇಳಿದಿದೆ. ಈ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗಿದೆ. ಲಾಕ್ಡೌನ್ನಿಂದಾಗಿ ವಾಹನಗಳ ಸಂಚಾರವು ಶೇಕಡಾ 30 ರಷ್ಟು ಕಡಿಮೆಯಾಗಿದೆ. 2020 ರಲ್ಲಿ ಅಪಘಾತಗಳ ಸಂಖ್ಯೆ 28 ಪ್ರತಿಶತದಷ್ಟು ಕುಸಿದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಂ ಲಕ್ಷ್ಮಿ ಪ್ರಸಾದ್ ಹೇಳಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಹೆದ್ದಾರಿಗಳಲ್ಲಿ ಹೆಚ್ಚಿನ ಅಪಘಾತಗಳು ಸಂಭವಿಸಿವೆ. 2020 ರಲ್ಲಿ ಹೆದ್ದಾರಿಗಳಲ್ಲಿ 429 ಅಪಘಾತಗಳು ಸಂಭವಿಸಿದ್ದು, ಇದರಲ್ಲಿ 108 ಮಂದಿ ಸಾವನ್ನಪ್ಪಿದ್ದಾರೆ ಮತ್ತು 480 ಮಂದಿ ಗಾಯಗೊಂಡಿದ್ದಾರೆ. ದಕ್ಷಿಣ ಕನ್ನಡದಲ್ಲಿ ಹೆದ್ದಾರಿಗಳಲ್ಲಿ 692 ಅಪಘಾತಗಳು ಸಂಭವಿಸಿದ್ದು, 115 ಮಂದಿ ಸಾವನ್ನಪ್ಪಿದ್ದಾರೆ. ಅತಿಯಾದ ವೇಗ, ಕುಡಿದು ವಾಹನ ಚಲಾಯಿಸುವುದು ಮತ್ತು ರಸ್ತೆ ನಿಯಮಗಳ ಉಲ್ಲಂಘನೆ ಈ ಅಪಘಾತಗಳಿಗೆ ಪ್ರಮುಖ ಕಾರಣಗಳಾಗಿವೆ. ಅದೇ ಸಮಯದಲ್ಲಿ, ಅವೈಜ್ಞಾನಿಕ, ಕಲಪೆ ರಸ್ತೆ ಕಾಮಾಗಾರಿ, ರಸ್ತೆಯ ಗುಂಡಿಗಳು ಮತ್ತು ರಾತ್ರಿಯಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಬೀದಿ ದೀಪಗಳು ಸಹ ಈ ಕೆಲವು ಅಪಘಾತಗಳಿಗೆ ಕಾರಣವಾಗಿವೆ ಎಂದು ತಿಳಿದುಬಂದಿದೆ.
ಲಾಕ್ ಡೌನ್ ಅವಧಿಯಲ್ಲಿ ಚೆಕ್ ಪೋಸ್ಟ್ಗಳನ್ನು ರಚಿಸಿ, ವಾಹನಗಳನ್ನು ಪರಿಶೀಲಿಸಲಾಗಿದೆ ಎಂದು ಉಡುಪಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರ್ ಚಂದ್ರ ತಿಳಿಸಿದ್ದಾರೆ. ಇದರ ಜೊತೆಗೆ, ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದರಿಂದ ಅಪಘಾತಗಳ ಸಂಖ್ಯೆಯ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಕೂಡಾ ಅವರು ಹೇಳಿದರು.