ಉಡುಪಿ, ಜ.20 (DaijiworldNews/PY): ರೋಟರಿ ಕ್ಲಬ್ ಉಡುಪಿ, ಉಡುಪಿ ಪೋಲಿಸ್, ಉಡುಪಿ ಟ್ರಾಫಿಕ್ ಠಾಣೆಯ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳಿಂದ ರಸ್ತೆ ಸುರಕ್ಷತಾ ಜಾಥ ನಡೆಯಿತು.









ಉಡುಪಿಯ ಜೋಡುಕಟ್ಟೆಯಿಂದ ಆರಂಭವಾದ ಜಾಥಾವನ್ನು ಉಡುಪಿ ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ್ ಉದ್ಘಾಟಿಸಿದರು.
ರಸ್ತೆ ಸುರಕ್ಷತೆಯ ಕುರಿತು ಪೋಸ್ಟರ್ ಕರಪತ್ರಗಳನ್ನು ವಿದ್ಯಾರ್ಥಿಗಳು ಹಿಡಿದು ಜೋಡುಕಟ್ಟೆಯಿಂದ ಸರ್ವಿಸ್ ಬಸ್ ನಿಲ್ದಾಣದವರೆಗೆ ಜಾಥಾ ನಡೆಯಿತು. ಉಡುಪಿಯ ಪೂರ್ಣಪ್ರಜ್ಞ ಕಾಲೇಜು ಮತ್ತು ಡಾ. ಜಿ.ಶಂಕರ್ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ್, "ಪ್ರತೀ ವರ್ಷ ಲಕ್ಷಾಂತರ ಜನ ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿದ್ದಾರೆ. ಇದರಲ್ಲಿ ಯುವ ಜನರ ಸಂಖ್ಯೆ ಹೆಚ್ಚಿದೆ. ಇದಕ್ಕಾಗಿ ರಸ್ತೆ ಸುರಕ್ಷತೆಯ ಬಗ್ಗೆ ಯುವಜನರಿಗೆ ಮಾಹಿತಿ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಒಂದು ತಿಂಗಳ ಕಾಲ ಈ ಕಾರ್ಯಕ್ರಮ ನಡೆಯುತ್ತದೆ. ಪ್ರತಿ ವರ್ಷ ವಿದ್ಯಾರ್ಥಿಗಳಿಗೆ ವಿವಿಧ ಕಾರ್ಯಕ್ರಮಗಳನ್ನು ನಾವು ಅಯೋಜಿಸುತಿದ್ದೆವು. ಎಲ್ಲರಿಗೂ ಜಾಗೃತಿ ಮುಡಿಸುವ ಕಾರ್ಯಕ್ರಮ ಇದು" ಎಂದರು
ರೋಟರಿ ಉಡುಪಿ ಅಧ್ಯಕ್ಷೆ ರಾಧಿಕಾ ಲಕ್ಷ್ಮೀನಾರಾಯಣ, ಕಾರ್ಯದರ್ಶಿ ದೀಪಾ ಭಂಡಾರಿ, ಉಡುಪಿ ಟ್ರಾಫಿಕ್ ಠಾಣಾ ಎಸ್ ಐ ಅಬ್ದುಲ್ ಖಾದರ್, ಚೈಲ್ಡ್ ಲೈನ್ನ ರಾಮಚಂದ್ರ ಉಪಾಧ್ಯಾಯ ಅಟೋ ಯೂನಿಯನ್ ಸದಸ್ಯರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.