ಕಾರ್ಕಳ, ಜ.20 (DaijiworldNews/PY): ಹೊಸ್ಮಾರು-ನಾರಾವಿ ನಡುವೆ ಹಾದು ಹೋಗಿರುವ ರಾಜ್ಯ ಹೆದ್ದಾರಿಯ ಈದು ದ್ವಾರದ ಬಳಿಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಗಂಭೀರ ರೀತಿಯಲ್ಲಿ ಗಾಯಗೊಂಡಿದ್ದಾರೆ.


ವಿಘ್ನೇಶ್ ಘಟನೆಯಲ್ಲಿ ಗಾಯಗೊಂಡವರು.
ಈದುವಿನಿಂದ ನಾರಾವಿ ಕಡೆಗೆ ದ್ವಿಚಕ್ರ ಮೋಟಾರ್ ವಾಹನದಲ್ಲಿ ತೆರಳುತ್ತಿದ್ದಾಗ ಚಾರ್ಮಾಡಿಯಿಂದ ನಾರಾವಿ ಮಾರ್ಗವಾಗಿ ಕಾರ್ಕಳ ಕಡೆಗೆ ಬರುತ್ತಿದ್ದ ಅಲ್ಟೋ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿತ್ತು. ಅಪಘಾತದ ತೀವ್ರತೆಗೆ ಕಾರಿನ ಟಯರ್ ಪಂಕ್ಚರ್ ಆಗಿ ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ರಿಕ್ಷಾಕ್ಕೂ ಡಿಕ್ಕಿ ಹೊಡೆದಿದೆ.