ಉಡುಪಿ, ಜ 21(DaijiworldNews/SM): ತಾಯಿ ಹಾಗೂ ಮಗು ನಾಪತ್ತೆಯಾಗಿರುವ ಘಟನೆ ತಾಲೂಕಿನ ಪುತ್ತೂರು ಗ್ರಾಮದ ನಿಟ್ಟೂರು ಬಾಳಿಗಾ ಫಿಶ್ ನೆಟ್ ಕಂಪೌಂಡ್ ಬಳಿ ನಡೆದಿದೆ.

ಇಲ್ಲಿನ ನಿವಾಸಿ ಲಕ್ಷ್ಮೀ(28) ಎಂಬ ಮಹಿಳೆಯು ತನ್ನ 3 ವರ್ಷದ ಮಗಳಾದ ಸಿಂಧು ಜೊತೆಗೆ ಜನವರಿ 18 ರಿಂದ ಕಾಣೆಯಾಗಿರುವ ಬಗ್ಗೆ ಮಾಹಿತಿ ಲಭಿಸಿದೆ.
ಕಾಣೆಯಾದ ಮಹಿಳೆಯು 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಬಲ್ಲವರಾಗಿದ್ದು, ಇವರ ಬಗ್ಗೆ ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.