ಮಂಗಳೂರು, ಜ.23 (DaijiworldNews/MB) : ಕಾವೂರಿನ ಮಹಿಳೆಯೊಬ್ಬರು ನೆರೆ ಮನೆಯಲ್ಲಿ ವಾಸಿಸುವ ವ್ಯಕ್ತಿ ಕಿರುಕುಳ ನೀಡುತ್ತಿರುವುದಾಗಿ ಮಹಿಳೆಯು ಆರೋಪಿಸಿದ್ದಾರೆ. ತನ್ನ ವೈಯಕ್ತಿಕ ವಿಡಿಯೋವನ್ನು ಸಾರ್ವಜನಿಕವಾಗಿ ಪ್ರಕಟಿಸುತ್ತೇನೆ ಎಂದು ವ್ಯಕ್ತಿಯು ಬೆದರಿಕೆ ಹಾಕಿದ್ದಾನೆ ಎಂದು ದೂರಿದ್ದಾರೆ.

ಈ ವಿಚಾರದಲ್ಲಿ ತಾನು ಮಾನಸಿಕ ಕಿರುಕುಳಕ್ಕೆ ಒಳಗಾಗುತ್ತಿದ್ದೇನೆ. ಹಾಗಾಗಿ ಸಂಬಂಧಪಟ್ಟವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಮಹಿಳೆ ಒತ್ತಾಯಿಸಿದ್ದಾರೆ.
ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಈ ಆಧಾರದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮಹಿಳೆಯ ಪತಿಯು ವಿದೇಶದಲ್ಲಿ ಕೆಲಸ ಮಾಡುತ್ತಿದ್ದು ಮಹಿಳೆಯು ಕಾವೂರಿನಲ್ಲಿ ವಾಸವಾಗಿದ್ದಾರೆ. ಆಕೆಯ ನೆರೆಮನೆಯ ರವಿರಾಜ್, ತನ್ನ ಖಾಸಗಿ ಜೀವನಕ್ಕೆ ಸಂಬಂಧಿಸಿದ ಕೆಲವು ವಿಡಿಯೋ ತುಣುಕುಗಳನ್ನು ಹೊಂದಿದ್ದಾನೆ ಎಂದು ಪೋನ್ ಕರೆ ಮಾಡಿ ಹಲವು ಬಾರಿ ಹೇಳಿದ್ದಾನೆ. ಈ ವೀಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆಯು ದೂರಿದ್ದಾರೆ. ಅಷ್ಟೇ ಅಲ್ಲದೆ ನನ್ನ ಮನೆಗೆ ಬಂದು ಮಾನಸಿಕ ಕಿರುಕುಳ ನೀಡಿದ್ದಾನೆ ಎಂದು ಕೂಡಾ ಆರೋಪಿಸಿದ್ದಾರೆ.