ಸುಳ್ಯ, ಜು 05:ಇಲ್ಲಿನ ದಂತ ವೈದ್ಯಕೀಯ ಕಾಲೇಜುವೊಂದರ ವಿದ್ಯಾರ್ಥಿನಿ ವಸತಿಗೃಹದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.೦೪ ಬುಧವಾರ ನಡೆದಿದೆ.
ಸುಳ್ಯ ಕೆವಿಜಿ ಟೆಂಟಲ್ ಕಾಲೇಜಿನ ವಿದ್ಯಾರ್ಥಿನಿ ಸುಮನಾ(19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಕೆವಿಜಿ ದಂತ ಮಹಾವಿದ್ಯಾಲಯದ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿನಿಯಾಗಿದ್ದು, ಕಾಲೇಜಿನ ವಸತಿಗೃಹದಲ್ಲಿ ವಾಸವಾಗಿದ್ದಳು. ಈಕೆ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದಿದ್ದು, ಪ್ರತಿಭಾವಂತೆಯಾಗಿದ್ದಳು. ಮಂಗಳವಾರ ನಡೆದ ಪ್ರಥಮ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ದೊರೆಯುವುದಿಲ್ಲ ಎಂದು ನೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.
ಸುಮನಾ ಡೆತ್ನೋಟ್ ಬರೆದಿಟ್ಟಿದ್ದು, ಸುಳ್ಯ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈಕೆ ಮೈಸೂರು ಗುರುರಾಜ್ ಲೇಔಟ್ ನಿವಾಸಿ ರಮೇಶ್ ಮತ್ತು ವಸಂತಿ ದಂಪತಿಗಳ ಪುತ್ರಿ. ಸುಳ್ಯ ವೃತ್ತ ನಿರೀಕ್ಷಕ ಸತೀಶ್ ಹಾಗೂ ಉಪನಿರೀಕ್ಷಕ ಮಂಜುನಾಥ, ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ವಾರಿಸುದಾರರಿಗೆ ಹಸ್ತಾಂತರಿಸಲಾಗಿದೆ.