ಬೆಂಗಳೂರು, ಜು 05: ಮುಖ್ಯ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮಂಡಿಸಿದ ಸಮ್ಮಿಶ್ರ ಸರಕಾರದ ಮೊದಲ ಬಜೆಟ್ ಯ ಮಂಡನೆ ಮುಗಿದ ಬೆನ್ನಲ್ಲೇ ವಿಪಕ್ಷ ಬಿಜೆಪಿ ಶಾಸಕರು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ, ಸರಕಾರ ಧೋಖಾ ಬಜೆಟ್ ಮಂಡಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರೈತರ ಸಾಲಮನ್ನಾ ಮಾಡುತ್ತೇವೆ ಎಂದ ಇವರು ಕೇವಲ 2 ಲಕ್ಷದವರೆಗೆ ಮಾತ್ರ ರೈತರ ಸಾಲಮನ್ನಾ ಮಾಡಿ ರೈತರ ಕಣ್ಣೊರೆಸುವ ತಂತ್ರ ನಡೆಸಿದ್ದಾರೆ ಎಂದು ಅಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕದ ಎಲ್ಲ ಜನರಿಗೆ ಧೋಖಾ ಮಾಡಿದ್ದಾರೆ. ಹಾಸನ, ಮಂಡ್ಯಗೆ ಮಾತ್ರ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದರು
ಇನ್ನು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮಾತನಾಡಿ ಇದು ಕರ್ನಾಟಕದ ಬಜೆಟ್ ಅಲ್ಲ. ಹಾಸನ, ಮಂಡ್ಯ, ರಾಮನಗರ ಜಿಲ್ಲೆಗಳ ಬಜೆಟ್. ಎಲ್ಲ ಇಲಾಖೆಗಳ ಅನುದಾನ ಕಡಿತ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಅವಕಾಶವಿಲ್ಲದಂತೆ ಬಜೆಟ್ ಮಂಡನೆ ಮಾಡಿದ್ದಾರೆ ಇದೊಂದು ನಿರಾಶದಾಯಕ ಬಜೆಟ್ ಎಂದು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಈ ಬಜೆಟ್ ಅಣ್ಣ-ತಮ್ಮಂದಿರ ಬಜೆಟ್ ಆಗಿದ್ದು, ನಾಡಿನ ಜನತೆಗೆ ಅವಮಾನ ಮಾಡಲಾಗಿದೆ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.