ಕಾಸರಗೋಡು, ಜ.26 (DaijiworldNews/MB) : ನಿಯಂತ್ರಣ ತಪ್ಪಿದ ಕಾರು ಟ್ರಾನ್ಸ್ ಫಾರ್ಮರ್ಗೆ ಡಿಕ್ಕಿ ಹೊಡೆದ ಘಟನೆ ಕಾಸರಗೋಡು ನೆಲ್ಲಿಕುಂಜೆ ಬಂದರಿನಲ್ಲಿ ಸೋಮವಾರ ರಾತ್ರಿ ನಡೆದಿದೆ. ಸ್ವಲ್ಪದರಲ್ಲೇ ಭಾರೀ ದುರಂತ ತಪ್ಪಿದೆ.


ಬಂದರಿನಿಂದ ನೆಲ್ಲಿಕುಂಜೆ ಕಡೆಗೆ ಬರುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಟ್ರಾನ್ಸ್ ಫಾರ್ಮರ್ ಸಮೀಪದ ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. ಕಾರಲ್ಲಿದ್ದ ಮೂವರು ಅಪಾಯದಿಂದ ಪಾರಾಗಿದ್ದಾರೆ. ಪರಿಸರದಲ್ಲಿ ವಿದ್ಯುತ್ ಸಂಪರ್ಕ ಮೊಟಕುಗೊಂಡಿದೆ.