ಮಂಗಳೂರು, ಜು07: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕೇಂದ್ರೀಯ ಕೈಗಾರಿಕಾ ಭದ್ರತಾ ದಳದವರಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ಪರಿಸರ ರಕ್ಷಣೆಯ ಉದ್ದೇಶದಿಂದ ಹಮ್ಮಿಕೊಂಡಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ 1500 ಗಿಡ ನೆಡುವುದರ ಮೂಲಕ ಸಿ.ಐ.ಎಸ್.ಎಫ್ ಸುವರ್ಣ ಮಹೋತ್ಸವವನ್ನು ಆಚರಿಸಿದರು. ವಿವಿಧ ರೀತಿಯ ತಳಿಯ ಸಸಿಗಳನ್ನು ನೆಡುವ ಮೂಲಕ ಪರಿಸರ ಜಾಗೃತಿಯನ್ನುಂಟು ಮಾಡಿದರು. ಆಧುನಿಕತೆ ಬೆಳೆದಂತೆಲ್ಲಾ ಪ್ರಕೃತಿಗೆ ಕೊಡಲಿ ಪೆಟ್ಟು ನೀಡುತ್ತಿರುವ ಈ ದಿನಗಳಲ್ಲಿ ಈ ಅರ್ಥಪೂರ್ಣ ಕಾರ್ಯಕ್ರಮದ ಮೂಲಕ ಮಂಗಳೂರು ವಿಮಾನ ನಿಲ್ದಾಣದ ಕೇಂದ್ರೀಯ ಕೈಗಾರಿಕಾ ಭದ್ರತಾ ದಳದವರು ಸಮಾಜಕ್ಕೆ ಮಾದರಿಯಾದರು.
ಈ ವನಮಹೋತ್ಸವ ಕಾರ್ಯಕ್ರಮದಲ್ಲಿ 75ಕ್ಕೂ ಅಧಿಕ ಕೇಂದ್ರೀಯ ಕೈಗಾರಿಕಾ ಭದ್ರತಾ ದಳದವರು ಭಾಗಿಯಾಗಿದ್ದರು.