ಮಂಜೇಶ್ವರ,ಜ.29 (DaijiworldNews/HR): ತರಕಾರಿ ಲಾರಿಯಲ್ಲಿ ಸುಮಾರು 110 ಕಿಲೋ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಾರಿಯಾಗಿದ್ದ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಪಾವೂರಿನ ಉಮ್ಮರ್ ಫಾರೂಕ್ (24) ಎಂದು ಗುರುತಿಸಲಾಗಿದೆ.
ಗುರುವಾರ ಪೊಲೀಸರನ್ನು ಕಂಡು ಪರಾರಿಯಾಗಲೆತ್ನಿಸಿದ ಈತನನ್ನು ಬೆನ್ನಟ್ಟಿದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸೆಪ್ಟ೦ಬರ್ ತಿಂಗಳಲ್ಲಿ ಕರ್ನಾಟಕದಿಂದ ತರಕಾರಿ ಲಾರಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಗಾಂಜಾವನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಈ ಸಂದರ್ಭದಲ್ಲಿ ಆರೋಪಿ ಪರಾರಿಯಾಗಿದ್ದನು ಎನ್ನಲಾಗಿದೆ.