ಪುತ್ತೂರು,ಜ.30 (DaijiworldNews/HR): ಮನೆಯೊಂದಕ್ಕೆ ಬೆಂಕಿ ಹೊತ್ತಿಕೊಂಡು ಮನೆ ಪೂರ್ತಿ ಸುಟ್ಟು ಹೋದ ಘಟನೆ ಜ.30ರಂದು ಮಧ್ಯಾಹ್ನ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಮಹಾಲಿಂಗೇಶ್ವರ ದೇವಾಸ್ಥಾನದ ದೇವಮಾರು ಗದ್ದೆಯ ಸಮೀಪದ ಮನೆಯೊಂದರಲ್ಲಿ ನಡೆದಿದೆ.



ರಬ್ಬರ್ ಹಾಗೂ ಪ್ಲಾಸ್ಟಿಕ್ ಗೋದಾಮು ಇದಾಗಿದ್ದು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ದುರಂತ ಸಂಭವಿಸಿದೆ ಎನ್ನಲಾಗಿದೆ.
ಇನ್ನು ಬೆಂಕಿ ಅವಘಡ ನಡೆದ ವಿಚಾರ ತಿಳಿಯುತ್ತಿದ್ದಂತೆ ಮನೆಯಲ್ಲಿದ್ದವರು ಹೊರಗೆ ಓಡಿ ಬಂದಿದ್ದರು. ಹೀಗಾಗಿ ಯಾವುದೇ ಸಾವು ನೋವು ಉಂಟಾಗಿಲ್ಲ ಎಂದು ವರದಿಯಾಗಿದೆ.
ಮನೆಯೊಳಗಡೆ ಶೇಖರಿಸಿದ್ದ ಪ್ಲಾಸ್ಟಿಕ್ ಉತ್ಪನ್ನಗಳು ಬೆಂಕಿಗೆ ಸುಟ್ಟುಹೊಗಿದ್ದು ಅಪಾರ ನಷ್ಟ ಉಂಟಾಗಿದೆ.
ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.