ಮಂಗಳೂರು, ಫೆ.04 (DaijiworldNews/MB) : ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿ ಮೂವರು ಗಾಯಗೊಂಡ ಘಟನೆ ಮಂಗಳೂರು ನಗರ ಹೊರವಲಯದ ಕುಳಾಯಿ ಸಮೀಪ ನಡೆದಿದೆ.

ಮೃತ ಮಹಿಳೆಯನ್ನು ಸುಹಾನಾ (26) ಎಂದು ಗುರುತಿಸಲಾಗಿದೆ. ಫಾತಿಮಾ ಶೌರೀನ್, ರಾಹಿಲ್ ಶಮೀಮ್, ರಾಝಿಕ್ ಶಹಾನ್ ಗಾಯಾಳುಗಳು. ಪ್ರಸ್ತುತ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿಕ್ಕಮಗಳೂರಲ್ಲಿ ನಡೆಯಲಿರುವ ಮದುವೆ ಕಾರ್ಯಕ್ರಮಕ್ಕೆ ಹೊರಟ್ಟಿದ್ದ ಅವರು, ಆಹಾರ ಪಾರ್ಸೆಲ್ ಮಾಡಿಸಿಕೊಂಡು ಕೃಷ್ಣಾಪುರ ಚೊಕ್ಕಬೆಟ್ಟುವಿಗೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಢಿಕ್ಕಿ ಹೊಡೆದಿದೆ.
ಕಾರಲ್ಲಿದ್ದ ನಾಲ್ಕು ಮಂದಿಗೂ ಗಾಯವಾಗಿದ್ದು ಈ ಪೈಕಿ ಮಹಿಳೆ ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಮಂಗಳೂರಿನ ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.