ಮಂಗಳೂರು, ಜು 10: ಅನಾರೋಗ್ಯದಿಂದ ಇಂದು ಬೆಂಗಳೂರಿನ ನಿವಾಸದಲ್ಲಿ ನಿಧನರಾದ ಮಾಜಿ ಸಚಿವ ಬಿ.ಎ. ಮೊಯಿದಿನ್ ಪಾರ್ಥೀವ ಶರೀರವನ್ನು ಮಂಗಳೂರಿಗೆ ತರಲಾಯಿತು. ಪಾರ್ಥೀವ ಶರೀರಕ್ಕೆ ಮಂಗಳೂರಿನ ಸ್ವಗೃಹದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು. ಪಾರ್ಥಿವ ಶರೀರವನ್ನು ಮಂಗಳೂರಿಗೆ ತಂದು ಬಜ್ಪೆಯಲ್ಲಿರುವ ಮನೆಯಲ್ಲೇ ಕುಶಾಲ ತೋಪಿನ ಮೂಲಕ ಸರಕಾರಿ ಗೌರವ ಸಲ್ಲಿಸಲಾಯಿತು.
ಸ್ಪೀಕರ್ ರಮೇಶ್ ಕುಮಾರ್ ಹೂಗುಚ್ಛ ಸಮರ್ಪಣೆ ಮಾಡಿದರು.ಸಚಿವ ಯು.ಟಿ.ಖಾದರ್, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್, ಪಾಲಿಕೆ ಕಮಿಷನರ್ ನಝೀರ್ ಪಾರ್ಥೀವ ಶರೀರಕ್ಕೆ ಗೌರವ ಸಲ್ಲಿಸಿದರು. ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಸಾರ್ವಜನಿಕರು ಬಿ.ಎ. ಮೊಹಿದಿನ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.