ಮಂಗಳೂರು, ಫೆ.06 (DaijiworldNews/PY): ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಇಬ್ಬರು ಪ್ರಯಾಣಿಕರು ಶಾರ್ಜಾದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ತಪಾಸಣೆಯ ಸಂದರ್ಭ ಅಕ್ರಮವಾಗಿ ಚಿನ್ನ ಹಾಗೂ ಕಾಸ್ಮೆಟಿಕ್ ವಸ್ತುಗಳನ್ನು ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಸುಮಾರು 5.84 ಲಕ್ಷ ಮೌಲ್ಯದ 120.38 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನವನ್ನು ಕಾಲಿನ ಅಡಿಯಲ್ಲಿಟ್ಟು ಸಾಗಾಟ ಮಾಡಲಾಗುತ್ತಿತ್ತು.
ಬಂಧಿತ ಪ್ರಯಾಣಿಕರಿಂದ ಸುಮಾರು 1.71 ಲಕ್ಷ ರೂ. ಮೌಲ್ಯದ ಕಾಸ್ಮೆಟಿಕ್ ವಸ್ತುಗಳನ್ನು ಸಹ ವಶಪಡಿಕೊಳ್ಳಲಾಗಿದೆ.