ಮಂಗಳೂರು, ಫೆ.06 (DaijiworldNews/PY): ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಅವರು ಅಪಘಾತದಲ್ಲಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಫೆ.6ರ ಶನಿವಾರ ಮುಂಜಾನೆ 5.15 ರ ಸುಮಾರಿಗೆ ಕತ್ತಲ್ಸಾರ್ ಅವರು ತಮ್ಮ ಕಾರಿನಲ್ಲಿ ಬಿಕರ್ನಕಟ್ಟೆಯಿಂದ ನಂತೂರು ಕಡೆಗೆ ತೆರಳುತ್ತಿದ್ದ ಸಂದರ್ಭ ನಂತೂರು ಜಂಕ್ಷನ್ ಬಳಿ ಎದುರಿನಿಂದ ಬರುತ್ತಿದ್ದ ಮೀನಿನ ಲಾರಿಗೆ ಹಾಗೂ ಕತ್ತಲ್ಸಾರ್ ಅವರ ಕಾರಿಗೆ ಡಿಕ್ಕಿಯಾಗಿದೆ.
ಕತ್ತಲ್ಸಾರ್ ಅವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸ್ಥಳಕ್ಕೆ ಆಗಮಿಸಿದ ಮಂಗಳೂರು ಪೂರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.