ಮಂಗಳೂರು,ಫೆ.06 (DaijiworldNews/HR): ವೃತ್ತಿಯಲ್ಲಿ ಬ್ಯೂಟಿಷಿಯನ್ ಆಗಿರುವ 'ಪರಿವರ್ತನ್ ಟ್ರಾನ್ಸ್ ಕ್ವೀನ್ 2018' ಪ್ರಶಸ್ತಿಯನ್ನು ಗೆದ್ದಿರುವ ಸಂಜನಾ ಚಲವಾದಿ ಅವರು ಮಂಗಳೂರು ದಕ್ಷಿಣ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಹುದ್ದೆ ಅಲಂಕರಿಸಿದ ಮೊದಲ ಮಂಗಳಮುಖಿ ಇವರಾಗಿದ್ದಾರೆ.

ಜನವರಿ 10, 11 ಮತ್ತು 12 ರಂದು ಯುವ ಕಾಂಗ್ರೆಸ್ ಚುನಾವಣೆಗಳು ಆನ್ಲೈನ್ನಲ್ಲಿ ನಡೆದಿದ್ದು, ಫಲಿತಾಂಶಗಳನ್ನು ಪ್ರಕಟಿಸಲಾಗಿದೆ. ಶಿವ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು, ಸೋಹನ್ ಮತ್ತು ದೀಕ್ಷಿತ್ ಪೂಜಾರಿ ಉಪಾಧ್ಯಕ್ಷರಾಗಿದ್ದಾರೆ. ಸಂಜನಾ ಚಲವಾಡಿ ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ಈ ಕುರಿತು ಮಾತನಾಡಿದ ಸಂಜನಾ,"ಯೂತ್ ಕಾಂಗ್ರೆಸ್ ಸೌತ್ ಬ್ಲಾಕ್ನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವುದು ನನಗೆ ತುಂಬಾ ಸಂತೋಷವಾಗಿದೆ" ಎಂದು ಹೇಳಿದ್ದಾರೆ.
ಇನ್ನು ಸಂಜನಾ ಅವರು ಬ್ಯೂಟಿಷಿಯನ್ ಕೋರ್ಸ್ ಅನ್ನು ಪೂರ್ಣಗೊಳಿಸಿದ್ದು, ಪ್ರಸ್ತುತ ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದು, ತನಗೆ ಸಹಾಯ ಮಾಡಿದ ಮತ್ತು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ 2018 ರಲ್ಲಿ ನಡೆದ 'ಪರಿವರ್ತನ್ ಟ್ರಾನ್ಸ್ ಕ್ವೀನ್ ಸೌಂದರ್ಯ ಸ್ಪರ್ಧೆಯಲ್ಲಿ ಸಂಜನಾ ಜಯಗಳಿಸಿದ್ದರು.