ಮಂಗಳೂರು, ಫೆ.06 (DaijiworldNews/HR): ದಕ್ಷಿಣ ಕನ್ನಡ ಆರೋಗ್ಯ ಬುಲೆಟಿನ್ ಪ್ರಕಾರ, ಜಿಲ್ಲೆಯಲ್ಲಿ ಶನಿವಾರ 28 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 33,975 ಕ್ಕೆ ಏರಿಕೆಯಾಗಿದೆ. ಈ ಪೈಕಿ 313 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.

ಒಟ್ಟು 5,33,010 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 4,99,035 ಮಂದಿಯ ವರದಿ ನಕಾರಾತ್ಮಕವಾಗಿದೆ. ಶುಕ್ರವಾರ 16 ಜನರನ್ನು ಬಿಡುಗಡೆ ಮಾಡಲಾಗಿದೆ, ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 740 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಇಂದಿನ ಕೊರೊನಾ ವರದಿ:
ಶನಿವಾರ 7 ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 23,385ಕ್ಕೆ ಏರಿಕೆಯಾಗಿದೆ. ಈ ಪೈಕಿ 48 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.
ಇಲ್ಲಿಯವರೆಗೆ 3,41,516ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 3,18,131 ಮಾದರಿಗಳು ನಕಾರಾತ್ಮಕವಾಗಿವೆ.
ಶನಿವಾರ 7 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಈವರೆಗೆ ಒಟ್ಟು 189 ಸಾವುಗಳು ಸಂಭವಿಸಿವೆ.