ಸುಳ್ಯ, ಫೆ.10 (DaijiworldNews/PY): ಸಂಪಾಜೆ ಗ್ರಾಮ ಪಂಚಾಯತ್ನ ವ್ಯಾಪ್ತಿಯಲ್ಲಿರುವ ಕೋಳಿ ಫಾರ್ಮ್ ಬಳಿ ವ್ಯಕ್ತಿಯೋರ್ವನ ಶವ ಪತ್ತೆಯಾಗಿದೆ.

ಮೃತರನ್ನು ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ರಾಮಣ್ಣ ಹಾಗೂ ನೀಲಮ್ಮ ದಂಪತಿಗಳ ಪುತ್ರ ಗಣೇಶ್ (22) ಎಂದು ಗುರುತಿಸಲಾಗಿದೆ.
ಮೃತ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ, ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಸುಳ್ಯ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.