ಮಂಗಳೂರು, ಫೆ. 10 (DaijiworldNews/SM): ರೌಡಿಶೀಟರ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಮಂಗಳೂರು ಹೊರವಲಯದ ಕಾಟಿಪಳ್ಳ ಎಂಬಲ್ಲಿ ನಡೆದಿದೆ. ಕಾಟಿಪಳ್ಳದ ರೌಡಿಶೀಟರ್ ಪಿಂಕಿ ನವಾಸ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಘಟನೆಯಲ್ಲಿ ಪಿಂಕಿ ನವಾಸ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಪಿಂಕಿ ನವಾಸ್ ದೀಪಕ್ ರಾವ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಎಂದು ತಿಳಿದುಬಂದಿದೆ. ದೀಪಕ್ ರಾವ್ ಹತ್ಯೆಗೆ ಪ್ರತಿಕಾರದ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.