ಮಂಗಳೂರು, ಫೆ. 10 (DaijiworldNews/SM): ದಕ್ಷಿಣ ಕನ್ನಡ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಬುಧವಾರ 16 ಹೊಸ ಕೊರೋನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 34,090ಕ್ಕೆ ಏರಿಕೆಯಾಗಿದೆ. ಈ ಪೈಕಿ 337 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.

ಇನ್ನು ಜಿಲ್ಲೆಯಲ್ಲಿ ಒಟ್ಟು 5,38,504 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಅದರಲ್ಲಿ 5,04,414 ಮಂದಿಯ ವರದಿ ನೆಗೆಟಿವ್ ಆಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆಯನ್ನು 33,013ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 22 ಮಂದಿ ಬುಧವಾರ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 740 ಸಾವುಗಳು ಸಂಭವಿಸಿವೆ.
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಬುಧವಾರ ಐದು ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 23,417ಕ್ಕೆ ಏರಿಕೆಯಾಗಿದೆ. ಈ ಪೈಕಿ 44 ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ. ಇಲ್ಲಿಯವರೆಗೆ 3,46,180 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 3,22,763 ನಕಾರಾತ್ಮಕವಾಗಿವೆ.
ಬುಧವಾರ 10 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 23,184ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 189 ಸಾವುಗಳು ಸಂಭವಿಸಿವೆ.