ಮಂಗಳೂರು, ಫೆ.11 (DaijiworldNews/PY): ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ಅವರ ಮುಖಕ್ಕೆ ಮಸಿ ಬಳಿದರೆ ಒಂದು ಲಕ್ಷ ರೂ.ಗಳನ್ನು ನೀಡುವುದಾಗಿ ಹೇಳಿದ್ದ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಅವರ ಹೇಳಿಕೆಯ ಬಗ್ಗೆ ಖಾಸಗಿ ವಾಹಿನಿಯೊಂದರಲ್ಲಿ ಲೈವ್ ಸಂದರ್ಶನದ ಸಂದರ್ಭ ವ್ಯಕ್ತಿಯೊಬ್ಬರು ಅವ್ಯಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ.

ಖಾಸಗಿ ವಾಹಿನಿಯೊಂದರಲ್ಲಿ ಪ್ರತಿಭಾ ಕುಳಾಯಿ ಅವರೊಂದಿಗೆ ನಡೆಯುತ್ತಿದ್ದ ಲೈವ್ ಸಂದರ್ಶನದ ಸಂದರ್ಭ ವ್ಯಕ್ತಿಯೋರ್ವರು ಸಾಮಾಜಿಕ ಜಾಲತಾಣದಲ್ಲಿ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ಅವಿನಾಶ್ ಬಿರ್ವ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಅವ್ಯಾಚ್ಯ ಶಬ್ದಗಳಿಂದ ಪ್ರತಿಭಾ ಕುಳಾಯಿ ಅವರಿಗೆ ನಿಂದಿಸಿದ್ದಾರೆ.
ಈ ಬಗ್ಗೆ ಪ್ರತಿಭಾ ಕುಳಾಯಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದು, ನಿಂದಿಸಿದ ವ್ಯಕ್ತಿಯ ಮೊಬೈಲ್ ಸಂಖ್ಯೆ, ವಿಳಾಸದ ವಿವರ ನೀಡಲು ಕೋರಿದ್ದಾರೆ.