ಉಡುಪಿ,ಸೆ 28: ಜಾತ್ಯಾತೀತ ಜನತಾದಳ ಬೈಂದೂರು ವಿಧಾನಸಭಾ ಕ್ಷೇತ್ರ ಇವರ ವತಿಯಿಂದ ಕರ್ನಾಟಕ ಕಾರ್ಮಿಕರ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ರವಿ ಶೆಟ್ಟಿ ಮತ್ತು ಸಂಗಡಿಗರು ಪಕ್ಷದ ಸೇರ್ಪಡೆ ಕಾರ್ಯಕ್ರಮ ಬೈಂದೂರು ರೋಟರಿ ಸಮುದಾಯ ಭವನದಲ್ಲಿ ಬುಧವಾರ ನಡೆಯಿತು. ಕರ್ನಾಟಕ ಕಾರ್ಮಿಕರ ವೇದಿಕೆ ಜಿಲ್ಲಾಧ್ಯಕ್ಷ ರವಿ ಶೆಟ್ಟಿ ಪಕ್ಷಕ್ಕೆ ಸೇರ್ಪಡೆಗೊಂಡು ಮಾತನಾಡಿದ ಅವರು ಕಳೆದ ನಾಲ್ಕು ವರ್ಷ ಮುಖ್ಯಮಂತ್ರಿಗಳು ಬಡವರ ಬಗ್ಗೆ ಯಾವ ಯೋಜನೆಯನ್ನು ನೀಡಿಲ್ಲ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರ ಸರ್ಕಾರದ ಸಮಯದಲ್ಲಿ ಬಡವರಿಗೆ ಸಾಕಷ್ಟು ಯೋಜನೆಗಳನ್ನು ನೀಡಿದರು. ಶಾಲಾ ಮಕ್ಕಳಿಗೆ ಉಚಿತ ಸೈಕಲ್ ವಿತರಣೆ ನೀಡಿದರು. ಆದರೆ ಈಗಿನ ಸರ್ಕಾರ ಕೇವಲ ಭರವಸೆಯಿಂದ ಮಾತ್ರ ಆಡಳಿತವನ್ನು ನಡೆಸಿಕೊಂಡು ಹೋಗುತ್ತಿದ್ದಾರೆ. ಇದಕ್ಕೆ ನಾವು ನಮ್ಮ ಪಕ್ಷದವರು ಇಂದಿನಿಂದ ಯುವಕರನ್ನು ಹುರಿದುಂಬಿಸಬೇಕು ಎಂದರು.
ಜಾತ್ಯಾತೀತ ಜನತಾದಳ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ, ಇವರು ಕಾಂಗ್ರೆಸ್ ಹಾಗೂ ಬಿಜೆಪಿ ಎರಡು ಪಕ್ಷಗಳು ಬ್ರಹ್ಮಾಂಡ ಭೃಷ್ಟಾಚಾರದಲ್ಲಿ ತೊಡಗಿ ರಾಜ್ಯದ ಸಂಪತ್ತನು ಕೊಳ್ಳೆ ಹೊಡೆದಿದ್ದಾರೆ. ಕಳೆದ ಬಾರಿ ರಾಜ್ಯದಲ್ಲಿ ಅಧಿಕಾರ ನಡೆಸಿದ ಬಿಜೆಪಿ ಸರ್ಕಾರ ಹಗರಣದಿಂದಾಗಿ 122 ಸ್ಥಾನದಿಂದ 40ಕ್ಕೆ ಇಳಿದಿದೆ. ಬಿಜೆಪಿ ಸರ್ಕಾರದ ಹಗರಣದ ವಿರುದ್ಧ ತೊಡೆ ತಟ್ಟಿದ ಸಿದ್ದರಾಮಯ್ಯ, ತಮ್ಮ ಅಧಿಕಾರವಧಿಯಲ್ಲಿ ರಾಜ್ಯವನ್ನು ಭೃಷ್ಠಾಚಾರದಲ್ಲಿ ದೇಶದಲ್ಲಿ ಪ್ರಥಮ ಸ್ಥಾನಕ್ಕೆ ತಂದು ನಿಲ್ಲಿಸಿದ್ದಾರೆ ಎಂದು ಲೇವಡಿ ಮಾಡಿದರು.ಬೈಂದೂರು ಜಾತ್ಯಾತೀತ ಜನತಾದಳಕ್ಕೆ 50ಕ್ಕೂ ಅಧಿಕ ಮಂದಿಗಳನ್ನು ಸೇರ್ಪಡೆಗೊಳಿಸಲಾಯಿತು.