ಮಂಗಳೂರು, ಫೆ. 12 (DaijiworldNews/SM): ಇಲ್ಲಿನ ಬಿಜೈ ಬಳಿಯ ಕಟ್ಟಡವೊಂದರಿಂದ ಆಕಸ್ಮಿಕವಾಗಿ ಬಿದ್ದು ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಮೃತನನ್ನು ಅಸ್ಸಾಂ ಮೂಲದ ಸದ್ದಾಂ ಎಂದು ಗುರುತಿಸಲಾಗಿದೆ.

ಅವರು ಗುತ್ತಿಗೆ ಕಂಪನಿಯಲ್ಲಿ ಕೆಲಸ ಮಾಡುವ ಕ್ಲೀನಿಂಗ್ ಸಿಬ್ಬಂದಿ ಎಂದು ತಿಳಿದುಬಂದಿದೆ. ಕಟ್ಟಡದ 7 ನೇ ಮಹಡಿಯ ಬಾಲ್ಕನಿಯಲ್ಲಿ ತನ್ನ ಕೆಲಸವನ್ನು ಮುಗಿಸಿದ ನಂತರ, ಆ ವ್ಯಕ್ತಿ ಜಾರಿಬಿದ್ದು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಉರ್ವಾ ಠಾಣಾ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.