ಉಳ್ಳಾಲ, ಫೆ.13 (DaijiworldNews/PY): ಆಸ್ಪತ್ರೆಯ ಖಾಸಗಿ ಕೊಠಡಿಯಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯ ಮೊಬೈಲ್ ಮೂಲಕ ವೀಡಿಯೋ ನಡೆಸಿದ್ದ ಆರೋಪಿಯನ್ನು ಉಳ್ಳಾಲದ ಪೊಲೀಸರ ತಂಡ ಶುಕ್ರವಾರ ಬಂಧಿಸಿದೆ.

ಮದನಿನಗರ ನಿವಾಸಿ ಅಬ್ದುಲ್ ಮುನೀರ್ (40) ಬಂಧಿತ.
ಅಸೌಖ್ಯ ನಿಮಿತ್ತ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಂಬಂಧಿಕರ ಜೊತೆಗಿದ್ದ ಮಹಿಳೆ ಸ್ನಾನ ಮಾಡಲು ತೆರಳಿದ್ದ ಸಂದರ್ಭ ಆರೋಪಿ ಮುನೀರ್ ಮೊಬೈಲ್ ಮೂಲಕ ಸ್ನಾನದ ದೃಶ್ಯವನ್ನು ಸೆರೆಹಿಡಿದಿದ್ದ. ಇದನ್ನು ಗಮನಿಸಿದ ಮಹಿಳೆ ಕೂಡಲೇ ಹೊರಬಂದಾಗ, ಆರೋಪಿ ಮುನೀರ್ ತಲೆಮರೆಸಿಕೊಂಡಿದ್ದನು.
ಈ ಕುರಿತು ಮಹಿಳೆ ಜ.20 ರಂದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ಕೈಗೆತ್ತಿಕೊಂಡ ಉಳ್ಳಾಲ ಪೊಲೀಸರು ಆಸ್ಪತ್ರೆಯ ಸಿಸಿಟಿವಿಯ ದಾಖಲೆಗಳನ್ನು ಪರಿಶೀಲಿಸಿದಾಗ ಮುನೀರ್ ಕೃತ್ಯದಲ್ಲಿ ತೊಡಗಿರುವುದು ಗೊತ್ತಾಗಿತ್ತು. ಆದರೆ ಆರೋಪಿ ತಲೆಮರೆಸಿಕೊಂಡಿದ್ದು, ಶುಕ್ರವಾರ ಪೊಲೀಸರು ಆತನನ್ನು ಮನೆ ಸಮೀಪ ಬಂಧಿಸಿದ್ದಾರೆ.
ಉಳ್ಳಾಲ ಠಾಣಾಧಿಕಾರಿ ಸಂದೀಪ್ ಜಿ.ಎಸ್ ಹಾಗೂ ಪಿಎಸ್ಐ ಶಿವಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಎಸ್ಐ ರೇವಣ್ಣ ಸಿದ್ಧಯ್ಯ ಹಾಗೂ ಸಿಬ್ಬಂದಿಗಳಾದ ಪ್ರಶಾಂತ್ ಮತ್ತು ಅಕ್ಬರ್ ಜೊತೆಗಿದ್ದರು.