ಕಾರ್ಕಳ, ಫೆ.14 (DaijiworldNews/MB) : ಕಾರ್ಕಳದಲ್ಲಿ ನೂತನವಾಗಿ ನಿರ್ಮಿಸಿರುವ ನ್ಯಾಯಾಲಯಗಳ ಸಂಕೀರ್ಣವನ್ನು ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಸ್.ಅಬ್ದುಲ್ ನಝೀರ್ ಅವರು ಫೆಬ್ರವರಿ 20ರಂದು ಲೋಕಾರ್ಪಣೆಗೈಯಲಿದ್ದಾರೆ.

ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕ್ ಅಧ್ಯಕ್ಷತೆ ವಹಿಸಲಿದ್ದಾರೆ.
ಉಪಮುಖ್ಯಮಂತ್ರಿ ಹಾಗೂ ಕರ್ನಾಟಕ ಲೋಕೋಪಯೋಗಿ ಇಲಾಖೆಯ ಸಚಿವ ಗೋವಿಂದ ಎಂ.ಕಾರಜೋಳ, ಕಾನೂನು ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಹಿಂದುಳಿದ ವರ್ಗಗಳ ಕಲ್ಯಾಣ, ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ಆಡಳಿತಾತ್ಮಕ ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜ್ ಘನ ಉಪಸ್ಥಿತರಿರುವರು.
ವಿಶೇಷ ಅತಿಥಿಗಳಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ, ಸವೋಚ್ಚ ನ್ಯಾಯಾಲಯದ ಆಡಿಷನಲ್ ಸಾಲಿಸಿಟರ್ ಜನರಲ್ ಆಫ್ ಇಂಡಿಯಾ ಕೆ.ಎಂ.ನಟರಾಜ್ ಪಾಲ್ಗೊಳ್ಳಲಿದ್ದಾರೆ.
ವಿಶೇಷ ಅಹ್ವಾನಿತರಾಗಿ ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ವಿ.ಸುನೀಲ್ ಕುಮಾರ್ ಬಾಗವಹಿಸಲಿದ್ದಾರೆ.