ಕಾಸರಗೋಡು, ಫೆ.16 (DaijiworldNews/MB): ಯುವಕನೋರ್ವನನ್ನು ತಂಡವೊಂದು ಇರಿದು ಗಾಯಗೊಳಿಸಿದ ಘಟನೆ ಮಂಗಳವಾರ ಮಧ್ಯಾಹ್ನ ಉಪ್ಪಳ ಪೇಟೆಯಲ್ಲಿ ನಡೆದಿದೆ.

ಗಾಯಗೊಂಡ ಉಪ್ಪಳ ಮಣಿಮುಂಡದ ಮುಹಮ್ಮದ್ ಹರ್ಶಿದ್ (33) ನನ್ನು ಕುಂಬಳೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪತ್ನಿ ಮತ್ತು ಮಕ್ಕಳ ಜೊತೆ ಉಪ್ಪಳ ಪೇಟೆಗೆ ಬಂದಿದ್ದ ಸಂದರ್ಭದಲ್ಲಿ ಈ ಕೃತ್ಯ ನಡೆಸಲಾಗಿದೆ. ಅಂಗಡಿಯಿಂದ ಸಾಮಾಗ್ರಿ ಖರೀದಿಸುತ್ತಿದ್ದ ಸಂದರ್ಭದಲ್ಲಿ ಮೂವರು ತಲವಾರಿನಿಂದ ಕಡಿದು ಪರಾರಿಯಾಗಿದೆ. ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.